ವಿಜಯಪುರಕ್ಕೆ ಮಂಗಳವಾರ ಆಗಮಿಸಿದ್ದ ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಜಿ ಅವರನ್ನು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರು ಭೇಟಿಯಾಗಿ, ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ನೀರು ಬಿಡುವಂತೆ ಮನವಿ ಮಾಡಿದರು.

ಕೃಷ್ಣಾ ಮತ್ತು ಹಿರಣ್ಯಕೇಶಿ ನದಿಗೆ ನೀರು ಬಿಡಲು ಮಹಾರಾಷ್ಟç ಡಿಸಿಎಂ ದೇವೆಂದ್ರ ಫಡ್ನವಿಸ ಸಮ್ಮತಿ ಸೂಚಿಸಿದ್ದಾರೆ ಎಂದು ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.
ಅವರು ಚಿಕ್ಕೋಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ವಿಜಯಪುರಕ್ಕೆ ಆಗಮಿಸಿದ್ದ ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಜಿ ಅವರನ್ನು ಭೇಟಿಯಾಗಿ, ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ನೀರಿನ ಒಳಹರಿವು ಕಡಿಮೆಯಾದ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆಯನ್ನು ನೀಗಿಸುವ ನಿಟ್ಟಿನಲ್ಲಿ ಹೆಚ್ಚಿನ ನೀರನ್ನು ಬಿಡುವಂತೆ ಮಾನ್ಯ ಉಪಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು ಎಂದು ತಿಳಿಸಿದರು.
ಬೇಸಿಗೆ ಜಾನುವಾರುಗಳಿಗೆ ಕುಡಿಯಲು ನೀರಿಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ರೈತರ ಬೆಳೆಗಳಿಗೂ ನೀರಿನ ಸಮಸ್ಯೆ ಎದುರಾಗಿ ಕೃಷಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮನವರಿಗೆ ಮಾಡಿದ ಹಿನ್ನಲೆಯಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ ಉಪಮುಖ್ಯಮಂತ್ರಿಗಳು, ಸಂಬAಧಪಟ್ಟ ಅಧಿಕಾರಿಗಳಿಗೆ ತಿಳಿಸಿ ತಕ್ಷಣವೇ ಕೋಯ್ನಾ ಮತ್ತು ವಾರಣಾ ಜಲಾಶಯಗಳಿಂದ ಕೃಷ್ಣಾ ನದಿಗೆ ೩ ಟಿಎಮ್‌ಸಿ ನೀರು ಮತ್ತು ಚಿತ್ರಾ ಅಣೆಕಟ್ಟಿನಿಂದ ಹಿರಣ್ಯಕೇಶಿಗೆ ೧ ಟಿ.ಎಂ.ಸಿ ನೀರು ಬಿಡುವಂತೆ ಸೂಚಿಸಿದ್ದು, ಅವರಿಗೆ ಕ್ಷೇತ್ರದ ಜನರ ಪರವಾಗಿ ಧನ್ಯವಾದಗಲನ್ನು ತಿಳಿಸಿದರು.
ನಿಪ್ಪಾಣಿ ಮತಕ್ಷೇತ್ರದ ಚುನಾವಣೆ ಉಸ್ತುವಾರಿಯಾದ ಡಾ. ಅಜೀತ ಘೋಪಛಾಡೆ, ಮಹಾದೇವ ರಾಯಜಾಧವ, ಮಹಾದೇವ ರೆಂದಾಳೆ, ಸುರೇಶ ಬಿರಾದಾರ ಉಪಸ್ಥಿತರಿದ್ದರು.


Recent Comments