ಸಿಎಂ ಬದಲಾವಣೆ ವಿಚಾರ ಅಪ್ರಸ್ತುತ. ಮಾರ್ಕ್ಸ್ ಕೊಡುವವರೇ ಸುಮ್ಮನೆ ಇದ್ದಾರೆ. ನಾವು ನೀವು ಚರ್ಚೆ ಮಾಡಿದರೇ ಅದು ಮೌಲ್ಯಯುತವಲ್ಲ ಎಲ್ಲವೂ ಅಪ್ರಸ್ತುತ ಎಂದು ಸಚಿವ ಪ್ರಿಯಾಂಕ ಖರ್ಗೆ ಹೇಳಿದರು.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಮಾಡುವ ಅಧಿಕಾರ ಇರುವ ಹೈ ಕಮಾಂಡ್ ನಾಯಕರು ಈ ಬಗ್ಗೆ ಮಾತನಾಡುತ್ತಿಲ್ಲ. ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲಾ, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಅವರೇ ಮಾತನಾಡುತ್ತಿಲ್ಲ. ಈ ಬಗ್ಗೆ ನಾವು ನೀವು ಮಾತನಾಡುವುದು ಅಪ್ರಸ್ತುತ ಎಂದರು.
ಸುರ್ಜೇವಾಲಾ ಸಭೆಯ ಕುರಿತು ಮಾತನಾಡಿದ ಅವರು, ಸಭೆಯಲ್ಲಿ ಸರ್ಕಾರದ ಯೋಜನೆ ರಾಜ್ಯದ ಜನರಿಗೆ ತಲುಪಿಸುವ ಕಾರ್ಯವನ್ನು ಮಾಡಬೇಕು ಎಂದು ಹೇಳಿದ್ದಾರೆ. ನಮ್ಮ ಭರವಸೆ ಈಡೇರಿಸುವ ಜೊತೆಗೆ ಜನರಿಗೆ ಸರ್ಕಾರದ ಯೋಜನೆ ಲಾಭ ತಲುಪಿಸುವ ಕಾರ್ಯವನ್ನು ಮಾಡಿ ಎಂದು ಹೇಳಿದ್ದಾರೆ. ಸಿಎಂ ಬದಲಾವಣೆ, ಪವರ್ ಶೇರಿಂಗ್ ವಿಚಾರ ಅಪ್ರಸ್ತುತ ಎಂದು ಅವರು ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಪಟ್ಟ ಬದಲಾವಣೆ ವಿಚಾರದ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, ಈ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ. ಎಲ್ಲವೂ ಹೈ ಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ. ಯಾವುದೇ ಕುರ್ಚಿ, ಯಾರಿಗೂ ಶಾಶ್ವತವಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ ಎಂದರು.
ಇನ್ನೂ ರಾಹುಲ್ ಗಾಂಧಿ ಭೇಟಿಯ ಕುರಿತು ಮಾತನಾಡಿದ ಅವರು, ಸಮಯ ಸಂಧರ್ಬದಲ್ಲಿ ಭೇಟಿಯಾಗಲು ಅವಕಾಶ ಸಿಗುತ್ತದೆ. ಆದರೆ ಪ್ರತಿಯೊಬ್ಬರಿಗೂ ಕೆಲವೊಂದು ಸಂಧರ್ಭ ಸನ್ನಿವೇಶ ಇರಬೇಕಲ್ಲ. ಬಿಹಾರ ಪ್ರವಾಸದಲ್ಲಿರುವ ಕಾರಣದಿಂದ ಭೇಟಿಯಾಗಲು ಆಗಿಲ್ಲ. ಈ ಕಾರಣದಿಂದ ರಾಜ್ಯ ನಾಯಕರು ವೀಕ್ ಇದ್ದಾರೆ ಎಂದು ಹೇಳಲು ಆಗುವುದಿಲ್ಲ ಎಂದು ಅವರು ಹೇಳಿದರು.
Recent Comments