ಬೆಂಗಳೂರು ಶಾಲಾ ಕಟ್ಟಡಗಳನ್ನು ಸಿ.ಎಸ್.ಆರ್. ನಿಧಿಯಿಂದ ನಿರ್ಮಿಸಲಾಗುತ್ತಿದೆ. ಸಚಿವ ಹೆಚ್.ಸಿ.ಮಹದೇವಪ್ಪ ಅವರು ಅದನ್ನು ಪಟ್ಟಿಯಲ್ಲಿ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಆಡಿಯೋ/ ವೀಡಿಯೊ ಕುರಿತಂತೆ ಮಾತನಾಡಿ ಸಚಿವ ಮಹದೇವಪ್ಪ ಅವರು ಐದು ಹೆಸರುಗಳಿರುವ ಪಟ್ಟಿ ಕೊಡುತ್ತಾರೆ ಎಂಬ ಆರೋಪದ ಕುರಿತು ಪ್ರತಿಕ್ರಿಯೆ ನೀಡಿ ನನ್ನ ರಾಜಕೀಯ ಜೀವನದಲ್ಲಿ ಹಣಕ್ಕಾಗಿ ಒಂದೇ ಒಂದು ವರ್ಗಾವಣೆಯನ್ನು ಮಾಡಿರುವುದನ್ನು ತೋರಿಸಿದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಮುಖ್ಯ ಮಂತ್ರಿಗಳು ತಿಳಿಸಿದರು. ಸಿಎಸ್ಆರ್ ನಿಧಿಯಡಿ ಶಾಲೆಗಳ ನಿರ್ಮಾಣ ಪಟ್ಟಿಯಲ್ಲಿ ಐದು ಹೆಸರು ಇದ್ದರೆ ಅದು ವರ್ಗಾವಣೆಯೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.


Recent Comments